Rebel Star Dr.Ambarish - Actor, Politician - Walkthrough

Arvi

Moderator
Staff member
80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂಬರೀಶ್‌ ಅವರ 'ಅಂತ'. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್‌.ರಾಜೇಂದ್ರ ಸಿಂಗ್‌ ಬಾಬು ನಿರ್ದೇಶನವಿದೆ. ರೆಬೆಲ್‌ಸ್ಟಾರ್‌ ಅಂಬರೀಶ್‌ ಇನ್ಸ್‌ ಪೆಕ್ಟರ್‌ ಸುಶೀಲ್‌ಕುಮಾರ್‌ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕನ್ವರ್‌ಲಾಲ್‌ ಎಂಬ ನೆಗೆಟಿವ್‌ ಪಾತ್ರವನ್ನು ಕೂಡ 'ಅಂತ' ಚಿತ್ರದಲ್ಲಿ ಮಾಡಿದ್ದರು. ಆ ಪಾತ್ರ ಜನಮೆಚ್ಚುಗೆ ಪಡೆದಿತ್ತು. ಈಗ ಈ ಚಿತ್ರ ಮತ್ತೂಮ್ಮೆ ನೂತನ ತಂತ್ರಜ್ಞಾನದೊಂದಿಗೆ ಬೆಳ್ಳಿತೆರೆಯ ಮೇಲೆ ಬರುತ್ತಿದೆ. ಸದ್ಯ ಲಹರಿ ಸಂಸ್ಥೆ ಬಳಿ ಈ ಚಿತ್ರದ ಹಕ್ಕುಗಳಿದ್ದು, ಲಹರಿ ಸಂಸ್ಥೆಯ ಮುಖಾಂತರ ದೀಪಕ್‌ ಪಿಕ್ಚರ್ ಹಾಗೂ ಶ್ರೀನಿವಾಸ ಪಿಕ್ಚರ್(ಗದಗ) ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಶೀಘ್ರದಲ್ಲೇ ಹೊಸ ರೂಪದ 'ಅಂತ' ಚಿತ್ರವನ್ನು ರಾಜ್ಯಾದ್ಯಂತ ಸುಮಾರು ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
 
Top